ಮಳೆಗೆ ಉತ್ತರತತ್ತರ ೧೮ ಮಂದಿ ಸಾವು

ನವದೆಹಲಿ,ಜು.೧೩- ಗುಜರಾತ್, ಮಹಾರಾಷ್ಟ್ರ, ಮಧ್ಯ ಪ್ರದೇಶ, ಉತ್ತರ ಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ ಕನಿಷ್ಠ ೧೮ ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

ಭಾರೀ ಮಳೆಯಿಂದಾಗಿ ನಾಸಿಕ್ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸ ಭರದಿಂದಸಾಗಿದೆ.

ಪ್ರಬಲ ಗಾಳಿಯೊಂದಿಗೆ ಭಾರೀ ಮಳೆಯಿಂದ ಮುಂಬೈ ಮತ್ತು ಉಪನಗರಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಅನೇಕ ಭಾಗಗಳು ಜಲಾವೃತಗೊಂಡಿವೆ., ಕೆಲವು ಸ್ಥಳಗಳಲ್ಲಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.

ಪೂರ್ವ ರಾಜಸ್ಥಾನದ ಹಲವು ಸ್ಥಳಗಳಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದ ಇತರ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.ಮೌಂಟ್ ಅಬು ಮತ್ತು ಪ್ರತಾಪಗಢದಲ್ಲಿ ಒಂದು ದಿನದಲ್ಲಿ ಗರಿಷ್ಠ ೮ ಸೆಂ.ಮೀ ಮಳೆ ದಾಖಲಾಗಿದೆ.

ದೆಹಲಿಯಲ್ಲಿ ತುಂತುರು ಮಳೆಯಾಗಿದೆ. ದೆಹಲಿ, ಮುಂಬೈನಲ್ಲಿ ಭಾರೀ ಮಳೆ ನಿರೀಕ್ಷೆ ಭಾರತದ ಆರ್ಥಿಕ ರಾಜಧಾನಿ ಮುಂಬೈ ಮುಂದಿನ ಎರಡು ದಿನಗಳ ಕಾಲ ’ಆರೆಂಜ್’ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಹಲವು ದಿನಗಳ ಕಾಲ “ಸಾಧಾರಣ ಮತ್ತು ಭಾರೀಮಳೆ” ನಿರೀಕ್ಷಿಸಲಾಗಿದೆ.

ಮನೆ ಕುಸಿತ:

ಥಾಣೆ ನಗರದ ಅಂಬಿಕಾ ನಗರ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಗುಡ್ಡದ ಮೇಲಿರುವ ಮನೆಯೊಂದರ ಕೆಳಗಿರುವ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದ್ದಾರೆ.

ಪ್ರಯಾಣಿಕರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ದಳ ಮತ್ತು ಆರ್‌ಡಿಎಂಸಿ ಸಿಬ್ಬಂದಿಯನ್ನು ಒಳಗೊಂಡ ತಂಡ ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿದೆ, ”ಎಂದು ಅವರು ಹೇಳಿದ್ದಾರೆ

ಬೆಂಗಳೂರಿನಲ್ಲಿ ಲಘು ಮಳೆ
ಬೆಂಗಳೂರಿನಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇದ್ದು, ಜುಲೈ ೧೬ ರವರೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.