ಮಳೆಗೆ ಕೊಚ್ಚಿ ಹೋದ ರಸ್ತೆ: ಸಂಚಾರಕ್ಕೆ ಸಂಕಟ

ಕಲಬುರಗಿ,ಜೂ.10-ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಆಳಂದ ತಾಲ್ಲೂಕಿನ ಬಿಲಗುಂದಾ ಗ್ರಾಮದ ರಸ್ತೆ ಕೊಚ್ಚಿ ಹೋಗಿದ್ದು, ಸಂಚಾರಕ್ಕೆ ಜನ ಸಂಕಟ ಪಡುವಂತಾಗಿದೆ.
ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ರಸ್ತೆ ಕೊಚ್ಚಿ ಹೋಗಿ ಜನ ಸಂಕಷ್ಟ ಎದುರಿಸುತ್ತಿದ್ದರೂ ಸಂಬಂಧಪಟ್ಟವರು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ ಹತ್ತು ವರ್ಷಗಳಿಂದ ಜನ ಇದೇ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅನೀಲಕುಮಾರ ಎಸ್.ಅನಂತಗೋಳ ತಿಳಿಸಿದ್ದಾರೆ.
ಮಳೆಯಿಂದಾಗಿ ರಸ್ತೆ ಕೊಚ್ಚಿ ಹೋಗಿರುವುದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಕ್ಷೇತ್ರದ ಶಾಸಕರು ಈ ಬಗ್ಗೆ ಈಗಲಾದರೂ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.