ಮಳೆಯಿಂದ ಮನೆ ಕಳೆದುಕೊಂಡ ಕುಟುಂಬ: ರಹೀಂ ಖಾನ್ ಪರಿಹಾರ

ಬೀದರ್ : ಜು.19:ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ ಹಾಗೆ ಬೀದರ್ g ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಇದರಿಂದಾಗಿ ಹಿಪ್ಪಳಗಾಂವ್ ಗ್ರಾಮದಲ್ಲಿ ಮನೆಗಳು ಕುಸಿದಿವೆ.

ಗ್ರಾಮದ ನಿರಂಜಪ್ಪ, ಮಾರುತಿ, ಸುಗಂಧ ಸೇರಿದಂತೆ ಹಲವರ ಮನೆ ಹಾನಿಯಾಗಿದೆ.

ಹೀಗಾಗಿ ವಿಷಯ ತಿಳಿದು ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ರಹೀಂಖಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮನೆ ಕಳೆದುಕೊಂಡವರಿಗೆ ಶಾಸಕರು 10 ಸಾವಿರ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರ ನೀಡಿದ್ದಾರೆ. ಅಲ್ಲದೇ ಶೀಘ್ರದಲ್ಲಿಯೇ ಹೊಸದಾಜಿ ಮನೆಗಳನ್ನು ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಿಗೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ಬೀದರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಚಂದ್ರಕಾಂತ ಹಿಪ್ಪಾಳಗಾಂವ್,ಗ್ರಾ.ಪಂ ಅಧ್ಯಕ್ಷರಾದ ವಿಜಯಕುಮಾರ ಹಿಪ್ಪಳಗಾಂವ್, ಕಂದಾಯ ರೆವನ್ಯೂವ್ ಇನ್ಸ್ಪೆಕ್ಟರ್ ರಾಜಕುಮಾರ. ಸೇರಿದಂತೆ ಹಲವರು ಸಾಥ್ ನೀಡಿದ್ದರು.