ಮಳೆಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಅಲ್ಲಮಪ್ರಭು ಭೇಟಿ

ಕಲಬುರಗಿ,ಸೆ.25-ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ್ ಅವರು ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ಅನೇಕ ಗ್ರಾಮಗಳಿಗೆ ಇಂದು ಭೇಟಿ ನೀಡಿದರು.
ಮಳೆಯಿಂದ ಹಾನಿಗೊಳಗಾದ ಭೀಮಳ್ಳಿ, ಭೋಸಗಾ, ಸಾವಳಗಿ, ಪಟ್ಟಣ, ಮೇಳಕುಂದಾ, ಕಣ್ಣಿ, ಹಡಗಿಲ ಸೇರಿದಂತೆ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಬೆಳೆಗಳು ಸಂಪೂರ್ಣ ಹಾಳಾಗಿದ್ದು,
ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ನೀರಿನ ಪೈಪುಗಳು ಹಾಳಾಗಿದ್ದು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ಒದಗಿಬೇಕೆಂದು ಸರಕಾರಕ್ಕೆ
ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸಂತೋಷ ಪಾಟೀಲ ಧನ್ನೂರ,ÀiÁಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಕಂಠ ರಾವ್, ಸಾವಳಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಈರಣ್ಣ ಡಬ್ಬಿ ಅವರು, ಗ್ರಾಮ ಪಂಚಾಯಿತಿ ಸದಸ್ಯರಾದ ಸಿಂಗೆ ಅವರ, ಕಾಂಗ್ರೆಸ್ ಮುಖಂಡರಾದ ಇಸ್ಮೈಲ್ ಮತ್ತು ಬೀರಪ್ಪ ಹಾಜರಿದ್ದರು.