ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಸಂಜೆವಾಣಿ ವಾರ್ತೆ
ಹನೂರು ಮೇ 6 :- ತಾಲೂಕಿನ ಮರಿ ಮಂಗಲ ವ್ಯಾಪ್ತಿಯ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಾಧ್ಯಂತ ಶುಕ್ರವಾರ ಗುಡುಗು ಸಹಿತ ಬಾರಿ ಬಿರುಗಾಳಿ ಸಾಧಾರಣ ಮಳೆಗೆ ರೈತರ ಜಮೀನುಗಳಲ್ಲಿ ಬೆಳೆಯಲಾಗಿದ್ದ ಬಾಳೆ ಬೆಳೆ ಮತ್ತು ಮನೆಗಳ ಮೇಲ್ಚಾವಣಿ ಬಿರುಗಾಳಿಗೆ ನೆಲ ಕಚ್ಚಿದೆ.
ರೈತರಿಗೆ ಭಾರಿ ಬಿರುಗಾಳಿ ಯಿಂದ ಹಾನಿಯಾಗಿರುವ ಬೆಳೆಗಳಿಗೆ ಕಂದಾಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ವರದಿ ನೀಡಲು ಸೂಚನೆ ನೀಡಲಾಗುವುದು ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆಗಳು ಹಾಳಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಅಧಿಕಾರಿಗಳಿಗೆ ನೀಡುವ ಮೂಲಕ ಪ್ರಕೃತಿ ವಿಕೋಪ ದಡಿ ಸಿಗುವ ಸೂಕ್ತ ಪರಿಹಾರ ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದರು
ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.