
ಬೆಂಗಳೂರು, ಅ.೧೪-ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಮಳೆ ಕೊರತೆಯಿಂದ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಮೆಕ್ಕೆ ಜೋಳ ಒಣಗುತ್ತಿದೆ.
ಜಿಲ್ಲೆಯಲ್ಲಿ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಬಹಳ ನಿರೀಕ್ಷೆಯಿಂದ ಬಿತ್ತನೆ ಆರಂಭಿಸಿದ್ದರು.
ಆದರೆ ಬಿತ್ತನೆ ಸಮಯದಲ್ಲಿ ಬಿದ್ದ ಮಳೆ ನಂತರ ಕೈಕೊಟ್ಟಿತು. ಬೆಳೆ ಬೆಳೆಯುವ ಹಂತದಲ್ಲೇ ಒಣಗಲು ಆರಂಭಿಸಿರುವುದರಿಂದ ರೈತರ ಪರಿಸ್ಥಿತಿ ಅತಂತ್ರವಾಗಿದೆ.
ರಾಜ್ಯದ ೪೦% ಕೃಷಿ ಭೂಮಿಯಲ್ಲಿ ಮೆಕ್ಕೆಜೋಳವನ್ನು ಬೆಳೆಯಲಾಗುತ್ತದೆ ಮತ್ತು ದಾವಣಗೆರೆ ರಾಜ್ಯದಲ್ಲಿ ಅತಿ ಹೆಚ್ಚು ಮೆಕ್ಕೆಜೋಳವನ್ನು ಬೆಳೆಯುವ ಜಿಲ್ಲೆಯಾಗಿದೆ ಆದರೆ ಈಗ ಮಳೆ ಕೊರತೆಯಿಂದಾಗಿ ಬೆಳೆದ ಬೆಳೆ ಸಂಪೂರ್ಣವಾಗಿ ಒಣಗುತ್ತದೆ.
ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ತೀವ್ರತೆ ಸ್ವಲ್ಪ ಹೆಚ್ಚಾಗಲಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ೩೦ ರಿಂದ ೩೨ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಇದರೊಂದಿಗೆ ಕೆಲವೆಡೆ ತುಂತುರು ಮಳೆಯಾಗಿದೆ.
ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿದೆ ಮತ್ತು ತಾಪಮಾನವು ಕಡಿಮೆಯಾಗಿದೆ. ಚಳಿಯ ಪ್ರಮಾಣ ಹೆಚ್ಚಾಗಿದೆ.
ಪಶ್ಚಿಮಘಟ್ಟದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಲಾಲ್ ಬಹದ್ದೂರ್ ಜಲಾಶಯಕ್ಕೆ ನೀರು ನಿಧಾನವಾಗಿ ಸಂಗ್ರಹವಾಗುತ್ತಿದೆ.
ಈ ಬಾರಿ ರಾಜ್ಯವು ಮುಂಗಾರು ಕೊರತೆಯಿಂದ ಬಳಲುತ್ತಿದೆ. ಜುಲೈ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.