ಮಳೆ ನಿರೀಕ್ಷೆಯಲ್ಲಿ ರೈತರು

ಬೆಂಗಳೂರು, ಅ.೨೭- ಆಗಸ್ಟ್ ತಿಂಗಳು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಬಿರುಸಿನ ಮಳೆಯಾಗುತ್ತಿಲ್ಲ. ಅಲ್ಪಸ್ವಲ್ಪ ಮಳೆಯಾದರೂ ಕೆಲವೇ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ.
ಮಳೆಗಾಗಿ ಹಗಲು ಇರುಳು ಕಾಯುತ್ತಿದ್ದಾರೆ ಉತ್ತರ ಒಳನಾಡಿನ ಅನ್ನದಾತರು ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಆರಂಭಿಸಿರುವ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಇಂದು ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಲಘು ಮಳೆಯಾಗುವ ನಿರೀಕ್ಷೆಯಿದೆ.
ದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಇರುತ್ತದೆ. ಉತ್ತರ ಒಳನಾಡಿನಲ್ಲೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಾತಾವರಣದ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದ ಬಹುತೇಕ ಜಲಾಶಯಗಳ ಒಳಹರಿವಿನ ಪ್ರಮಾಣವೂ ತಗ್ಗಿದೆ. ಸೆಪ್ಟೆಂಬರ್‌ನಲ್ಲಿ ಉತ್ತರದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತದೆ.