ಮಳೆ: ಪರಿಹಾರಕ್ಕೆ ಸಿಎಂ ಸೂಚನೆ

ಬೆಂಗಳೂರು, ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ ಬಗ್ಗೆ ಇಂದು ಸಭೆ ನಡೆಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೀ ಹೆಚ್ಚು ಮಳೆಯಾಗುತ್ತಿರುವ ಜಿಲ್ಲಾಧಿಕಾರಿಗಳೊಂದಿಗೂ ವೀಡಿಯೊ ಸಂವಾದ ನಡೆಸಿ, ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೆರವನ್ನು ನೀಡುವುದಾಗಿ ಅವರು ಹೇಳಿದರು.
ಮಳೆ ಅನಾಹುತಗಳ ಸಭೆಯ ನಂತರ ಮಂಕಿಪಾಕ್ಸ್ ನಿಯಂತ್ರಣದ ಬಗ್ಗೆಯೂ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.