ಮಳೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ*

ಶಿವಮೊಗ್ಗ, ಮೇ.26; ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಅವರು ಇಂದು ಮಳೆಗಾಲದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ವಿವಿಧೆಡೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಾಗೂ ಪ್ರವಾಹ ಉಂಟಾಗಬಹುದಾದ ಸ್ಥಳಗಳ ಪರಿಶೀಲನೆ ನಡೆಸಿದರು.ರಾಗಿಗುಡ್ಡ, ವಿದ್ಯಾನಗರ ರಾಜಾಕಾಲುವೆ, ಹರಿಗೆ ಚಾನಲ್ ಏರಿ ಇತರೆ ಪ್ರದೇಶಗಳ ಪರಿಶೀಲನೆ ನಡೆಸಿದರು. ಈ ವೇಳೆ ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಇತರೆ ಅಧಿಕಾರಿಗಳು ಹಾಜರಿದ್ದರು.