ಮಳೆ ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

ಬೆಂಗಳೂರು,ಜೂ.೪-ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಿಂದ ಅನಾಹುತಗಳಾಗದಂತೆ ಕಟ್ಟೆಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬೆಳಗಾವಿ, ಧಾರವಾಡ ಜಿಲ್ಲಾ ಪ್ರವಾಸಕ್ಕೆ ಹೊರಡುವ ಮುನ್ನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚೆರಿಕೆ ಕ್ರಮಗಳ ಬಗ್ಗೆ ನಿನ್ನೆಂiiಷ್ಟೇ ಸಚಿವರು, ಅಧಿಕಾರಿಗಳ ಸಭೆ ನಡೆಸಿ ಸೂಚನೆಗಳನ್ನು ನೀಡಿದ್ದೇನೆ ಎಂದರು.
ಮಳೆಗೆ ಸಂಬಂಧಿಸಿದಂತೆ ಎಲ್ಲ ಕಡೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ ಎಂದು ಅವರು ಹೇಳಿದರು.
ಇಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಕೋವಿಡ್ ಪರಿಸ್ಥಿತಿ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸುವುದಾಗಿ ಹೇಳಿದರು.