ಮಳೆ ಹಾನಿ ಡಿಸಿ ಜತೆ ಸಿಎಂ ಸಂಜೆ ಸಂವಾದ

ಬೆಂಗಳೂರು,ಆ.೬- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಳೆಪೀಡಿತ ಜಿಲ್ಲೆಗಳ
ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸುವರು.
ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿಗಳು, ಆರ್‌ಟಿ ನಗರದ ತಮ್ಮ ಮನೆಯಿಂದಲೇ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಲಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಜಿಲ್ಲಾಧಿಕಾರಿಗಳ ಈ ವೀಡಿಯೊ ಸಂವಾದದಲ್ಲಿ ಭಾಗಿಯಾಗುವರು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಭಾರಿ ಮಳೆಯಿಂದ ನೆರೆ ಪರಿಸ್ಥಿತಿಗೆ ಒಳಗಾಗಿರುವ ದಕ್ಷಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಯಾದಗಿರ್, ಕೊಪ್ಪಳ, ಹಾವೇರಿ, ಬೀದರ್, ಕಲಬುರಗಿ, ಗದಗ್ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ವೀಡಿಯೊ ಸಂವಾದ ನಡೆಸಿ ಮಳೆ ಪರಿಹಾರ ಕಾರ್ಯಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡುವರು.