ಮಳೆ ಹಾನಿ ಹಿನ್ನೆಲೆ:ತಕ್ಷಣ ಪರಿಹಾರಕ್ಕೆ 20೦ ಕೋಟಿ ಬಿಡುಗಡೆ

ಬೆಂಗಳೂರು,ಆ. 6- ರಾಜ್ಯದಲ್ಲಿ ಮಳೆ ಹಾನಿ ಬಾಧಿತ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಕಾಮಗಾರಿ ಕಾಮಗಾರಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ 200 ಕೋಟಿ ರೂ ಬಿಡುಗಡೆ ಮಾಡಿದೆ.ಮಳೆಯಿಂದ ಹಾನಿಗೆ ಒಳಗಾಗಿರುವ 21 ಜಿಲ್ಲೆಗಳಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ ,ಗದಗ ,ಹಾಸನ, ಹಾವೇರಿ, ಕೊಪ್ಪಳ ,ಹಾಸನ, ಮಂಡ್ಯ ತುಮಕೂರು,ಶಿವಮೊಗ್ಗ, ಉಡುಪಿ,ಉತ್ತರ ಕನ್ನಡ, ವಿಜನಗರ,ಮೈಸೂರು,, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.ಜುಲೈ ಹಾಗೂ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸುರ್ತಾಗಿ ಅನುದಾನ ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗಳ ಕೋರಿಕೆ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ರೂ.200.00 ಕೋಟಿಗಳನ್ನು ಬಿಡುಗಡೆ ಮಾಡಲು ಆದೇಶಿಸಲಾಗಿದೆ.2022-23ನೇ ಸಾಲಿನ ಆಯಾವ್ಯಯದಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ, ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ಮಾರ್ಗ ಸೂಚಿಯಡಿ ವಿಕೋಪ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಪಾಲು ರೂ.161,00 ಕೋಟಿ ಹಾಗೂ ಸರ್ಕಾರದ ಪಾಲು ರೂ.221.34 ಕೋಟಿಗಳನ್ನೊಳಗೊಂಡಂತೆ ಒಟ್ಟು. 885.34 ಕೋಟಿ ಹಂಚಿಕೆ ಮಾಡಲಾಗಿದೆ ಎಂದ ಆದೇಶಲ್ಲಿ ತಿಳಿಸಲಾಗಿದೆ.2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮಾನವ ಜೀವ ಹಾನಿ, ಜಾನುವಾರು ಜೀವ ಹಾವಿ ಬೆಳ ಹಾವಿ, ಮನೆ ಹಾನಿ ಹಾಗೂ ಸಾರ್ವಜನಿಕ ಮೂಲ ಸೌಕರ್ಯ ಜಾನಿಯಾಗಿರುವುದು ಜಿಲ್ಲೆಗಳಲ್ಲಿ 200 ಕೋಟಿ ರೂ ಪರಿಹಾರ ಬಿಡುಗಡೆ ಮಾಡಲಾಗಿದೆ.