ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳ ಬಂಧನ

ಬಸವಕಲ್ಯಾಣ:ಸೆ.26: ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಸೆ.21ರಂದು ತಡರಾತ್ರಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೆÇಲೀಸರು ಬಂಧಿಸಿದ್ದಾರೆ.

ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಬಂಧಿತ ಆರೋಪಿಗಳು ಎಂದು ಪೆÇಲೀಸರು ತಿಳಿಸಿದ್ಧಾರೆ.

ಸೆ.21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡಿದ್ದರು. ಅಂದು ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೆÇಲೀಸರು ಗ್ರಾಮಸ್ಥರ ಮನವೊಲಿಸಿ ಕೇಸರಿ ಧ್ವಜ ತೆಗೆಸುವಲ್ಲಿ ಯಶಸ್ವಿಯಾಗಿದ್ದರು.

ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.