ಮಸೂದೆಗಳ ಪ್ರತಿಯನ್ನು ಸುಟ್ಟು ವಿರೋಧಿಸಿದ ರೈತ ಸಂಘಟನೆಗಳು

ಸಿರುಗುಪ್ಪ ಜೂ 06 : ನಗರದ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ನಾಯಕ ಪ್ರೋ.ನಂಜುಂಡ ಸ್ವಾಮಿ ಸ್ಥಾಪಿತ ರೈತ ಸಂಘ, ಕರ್ನಾಟಕ ರೈತ ಸಂಘ ಸಹಯೋಗದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ರೈತರ ವಿರೋಧಿ ಮಸೂದೆಗಳ ವಾಪಸ್ಸ್ ಪಡೆಯುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮಸೂದೆಗಳ ಪ್ರತಿಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು.
ಕರ್ನಾಟಕ ರಾಜ್ಯ ರೈತ ನಾಯಕ ಪ್ರೋ.ನಂಜುಂಡ ಸ್ವಾಮಿ ಸ್ಥಾಪಿತ ರೈತ ಸಂಘದ ತಾಲೂಕು ಅಧ್ಯಕ್ಷ ವಾ.ಹುಲುಗಯ್ಯ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ರೈತರ ವಿರೋಧಿ ಮಸೂದೆಗಳು ರೈತರಿಗೆ ಮುಂದಿನ ದಿನಗಳಲ್ಲಿ ತೊಂದರೆಯಾಗುತ್ತದೆ, ಈ ಮಸೂದೆಗಳನ್ನು ಹಿಂಪಡೆಯುವಂತೆ ತಿಂಗಳಗಳ ಕಾಲ ಪ್ರತಿಭಟನೆ ನಡೆಸಿದರೂ ಕೇಂದ್ರ ಸರ್ಕಾರವು ವಾಪಸ್ಸ್ ಪಡೆಯದೆ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ, ಕೂಡಲೇ ಈ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದರಾಮನಗೌಡ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ವಿ.ಮಾರುತಿ ಇದ್ದರು.