ಮಸ್ಕಿ:ಕಾಂಗ್ರೆಸ್ ಗೆಲುವು ಖಚಿತ

ಗಂಗಾವತಿ ಎ.16: ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸವನಗೌಡ ತುರ್ವಿಹಾಳ ಅವರ ಗೆಲುವು ಶತಸಿದ್ದ ಎಂದು ಮಸ್ಕಿ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದರು.
ಸ್ಥಳೀಯ ನಗರಸಭೆ ಮಾಜಿ ನಗರ ಯೋಜನೆ ಪ್ರಾಧಿಕಾರದ ಅದ್ಯಕ್ಷ ನಾಗರಾಜ್ ನಂದಾಪುರ ಅವರ ಮನೆಗೆ ಶುಕ್ರವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕ್ಷೇತ್ರದಲ್ಲಿ ಅನುಕಂಪದ ಅಲೆ ಇದೆ. ಆರ್‌.ಬಸವನಗೌಡ ತುರ್ವಿಹಾಳ ಅವರು ಅಧಿಕ ಮತಗಳಿಂದ ವಿಜಯ ಸಾಧಿಸಲಿದ್ದಾರೆ. ಅಲ್ಲದೇ ಬಸವ ಕಲ್ಯಾಣ ಹಾಗೂ ಬೆಳಗಾವಿ ಸಹ ಪಕ್ಷದ ಅಭ್ಯರ್ಥಿಗಳು ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಸ್ಕಿ ಕ್ಷೇತ್ರದಲ್ಲಿ ರಾಷ್ಟ್ರ ಹಾಗೂ ರಾಜ್ಯ ನಾಯಕರು ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ,ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸಗಳನ್ನು ಮುದ್ದಿಟ್ಟುಕೊಂಡು ಮತಯಾಚನೆ ಮಾಡಿದ್ದು, ಕಾಂಗ್ರೆಸ್ ಪರ ಅಲೆ ಇದೆ, ಹೀಗಾಗಿ ಕ್ಷೇತ್ರ ಕೈ ವಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಅಲೆ ವ್ಯಾಪಕವಾಗಿ ಇದೆ. ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ವಂಚಿತವಾಗಿದ್ದು, ಅನಾಥವಾಗಿದೆ. ಈ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಕರೋನ ಸಂಪೂರ್ಣ ನಿಯಂತ್ರಣ ಮಾಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯದಲ್ಲಿ ಕರೋನಾ ಸೋಂಕು ಪ್ರಕರಣ ಏರಿಕೆಗೆ ಸರ್ಕಾರದ ದಂದ್ವ ನೀತಿಯ ಕಾರಣ ಎಂದು ಆರೋಪಿಸಿದರು.
ಬಳಿಕ ಧ್ರುವ ನಾರಾಯಣ ಅವರನ್ನು ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ನಾಗರಾಜ್ ನಂದಾಪುರ,ನಗರಸಭೆ ಮಾಜಿ ಸದಸ್ಯ ಹುಸೇನಪ್ಪ ಹಂಚಿನಾಳ, ಸೇರಿ ಇತರರು ಉಪಸ್ಥಿತರಿದ್ದರು.