ಮಸ್ಕಿ : ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ರಾಯಚೂರು.ಏ.೦೩- ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಸನಗೌಡ ತುರುವಿಹಾಳರವರ ಅವರ ಪರವಾಗಿ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ರವರು ಮರ್ಕಂದಿನ್ನಿ ಗ್ರಾಮದಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು, ಹಂಪಯ್ಯ ಸಾಹುಕಾರ, ಮಲ್ಲಿಕಾರ್ಜುನ್ ಪಾಟೀಲ್, ರಾಜಶೇಖರ್ ನಾಯಕ್, ಕೇಶವ, ಶಾಂತಪ್ಪ, ನಾಗೇಂದ್ರಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಸೇರಿ ಅಭ್ಯರ್ಥಿಯ ಪರ ಮತಯಾಚನೆ ಮಾಡಿದರು.