ಮಸ್ಟರಿಂಗ್ ಕೇಂದ್ರಕ್ಕೆ ತೆರಳುವ ಮತಗಟ್ಟೆ ಅಧಿಕಾರಿಗಳಿಗೆ ಬಸ್ಸಿನ ವ್ಯವಸ್ಥೆ

ಕಲಬುರಗಿ,ಮೇ.7: ಕರ್ನಾಟಕ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ಇದೇ ಮೇ-10 ರಂದು ಮತದಾನ ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳು ಜಿಲ್ಲೆಯ ವಿವಿಧ ವಿಧಾನಸಭೆ ಮತಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಮೇ 9 ರಂದು ಬೆಳಿಗ್ಗೆ 5 ಗಂಟೆಯಿಂದ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಿಂದ ಹೊರಡಲು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರು ತಿಳಿಸಿದ್ದಾರೆ.