ಮಹಂತ ಶಿವಯೋಗಿ ಸ್ವಾಮೀಜಿ ಜನ್ಮಜಯಂತಿ ಆಚರಣೆ

ಕುಣಿಗಲ್, ಆ. ೩- ಡಾ. ಶ್ರೀ ಮಹಂತ ಶಿವಯೋಗಿ ಸ್ವಾಮೀಜಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.
ತಾಲ್ಲೂಕು ಆಡಳಿತವು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗ್ರೇಡ್-೨ ತಹಶೀಲ್ದಾರ್ ಗೋವಿಂದರಾಜು ರವರ ನೇತೃತ್ವದಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಗಳ ಜನ್ಮ ಜಯಂತಿ ಆಚರಿಸಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮದ್ಯಪಾನ ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾವಿಧಿಯನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ದಲಿತ ಮುಖಂಡ ವರದರಾಜು, ಕಂದಾಯ ಇಲಾಖೆಯ ರಂಗರಾಜು ಮತ್ತಿತರರು ಉಪಸ್ಥಿತರಿದ್ದರು.