ಮಹದಾಯಿ: ರೈತರಿಂದ ಪ್ರತಿಭಟನೆ

ಹುಬ್ಬಳ್ಳಿ,ಡಿ4: ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಆಗ್ರಹಿಸಿ ಮಹಾದಾಯಿ ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿಂದು ನಗರದ ಚೆನ್ನಮ್ಮ ವೃತ್ತದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು ಪ್ರತಿಭಟನೆ ನಡೆಸಿ ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಮಹಾದಾಯಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅನಗತ್ಯ ವಿಳಂಬ ಧೋರಣೆ ಅನುಸರಿಸುತ್ತಿದ್ದು ಖಂಡನೀಯವಾಗಿದ್ದು, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಹಾದಾಯಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ವಿಷಯ ಪ್ರಸ್ತಾಪಿಸಿ ಶೀಘ್ರವೇ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಒತ್ತಾಯಿಸಲಾಯಿತು.

ಈ ವೇಳೆ ಮಹಾದಾಯಿ ಕಳಸ-ಬಂಡೂರಿ ಹೋರಾಟ ಸಮನ್ವಯ ಸಮಿತಿಯ ರೈತರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.