ಮಹದೇವನಾಯಕನ ಶವ ಇಟ್ಟು ಚಂದಗಾಲು ಗ್ರಾಮಸ್ಥರು ಪ್ರತಿಭಟನೆ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಜೂ.10:- ಚೀರನಹಳ್ಳಿ ಗ್ರಾಮದ ಲೋಕೇಶ್ ಬೆದರಿಕೆಯಿಂದ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಮಹದೇವನಾಯಕ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಘೋಷಿಸಬೇಕು ಮತ್ತು ದೂರು ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ ಪೆÇಲೀಸರ ವಿರುದ್ದವು ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಬೇಕು ಎಂದು ಚಂದಗಾಲು ಗ್ರಾಮಸ್ಥರು ಶವದ ಮುಂದೆ ಪ್ರತಿಭಟಿಸಿದರು.
ಪಟ್ಟಣದ ಹೊರ ವಲಯದ ಅರ್ಕೇಶ್ವರ ದೇವಾಲಯದ ಬಳಿ ಇರುವ ಹಾಸನ-ಮೈಸೂರು ಮುಖ್ಯ ರಸ್ತೆಯಲ್ಲಿ ಮೃತ ಮಹದೇವನಾಯಕನ ಶವವಿದ್ದ ತುರ್ತುವಾಹನವನ್ನು ರಸ್ತೆ ಮಧ್ಯದಲ್ಲಿ ನಿಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ನೂರಾರು ಮಂದಿ ಗ್ರಾಮಸ್ಥರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಈ ಸಂದಭರ್ದದಲ್ಲಿ ಮಾತನಾಡಿ, ರಾಜ್ಯ ನಾಯಕರ ಯುವ ಸೇನೆಯ ಅಧ್ಯಕ್ಷ ದೇವರಾಜ್ ಟಿ. ಕಾಟೂರು, ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಬೇಡಿಕೆಯಂತೆ ಪರಿಹಾರ ನೀಡಿದ ಪೆÇಲೀಸರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಪ್ರತಿಭಟನಾ ನಿರತರೊಂದಿಗೆ ಮಾತನಾಡಿದ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಎಲ್. ನಾಗೇಶ್ ಮತ್ತು ಡಾ. ನಂದಿನಿ ಘಟನೆ ಸಂಬಂಧ ತಪ್ಪಿಸ್ಥ ಪೆÇಲೀಸರ ವಿರುದ್ದ ತನಿಖೆ ನಡೆಸಿ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುವುದರ ಜತೆಗೆ ಸರ್ಕಾರದಿಂದ ದೊರೆಯುವ ಎಲ್ಲಾ ಪರಿಹಾರ ಮತ್ತು ಸವಲತ್ತು ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ಮಹದೇವನಾಯಕನ ಶವವನ್ನು ರಸ್ತೆಯ ಮಧ್ಯೆಯಿಟ್ಟು ಒಂದು ಘಂಟೆಗೂ ಹೆಚ್ಚು ಕಾಲ ಚಂದಗಾಲು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ವಾಹನ ದಟ್ಟಣೆಯಿಂದ ಸಂಚಾರ ವ್ಯತ್ಯಾಯವಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಬಾರಿ ಬಿಗಿ ಪೆÇಲೀಸ್ ಬಂದೋ ಬಸ್ ನಿಯೋಜಿಸಲಾಗಿತ್ತು.
ನಂತರ ಮಹದೇವನಾಯಕನ ಶವವನ್ನು ಪೆÇಲೀಸ್ ಭದ್ರತೆಯೊಂದಿಗೆ ಚಂದಗಾಲು ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಈ ವೇಳೆ ಶಾಸಕ ಡಿ. ರವಿಶಂಕರ್‍ಸೇರಿದಂತೆ ನಾಯಕ ಸಮಾಜದ ಪ್ರಮುಖರು ಮತ್ತು ಮೃತನ ಕುಟುಂಬಸ್ಥರು ಇದ್ದರು.