
ಬೆಂಗಳೂರು,ಮೇ.೫- ವಿಧಾನ ಸಭಾ ಚುನಾವಣಾ ಮತದಾನ ಸಮೀಪಿಸುತ್ತಿದ್ದಂತೆ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್ ನಾಗೇಶ್ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದು,
ವೈಟ್ ಫೀಲ್ಡ್,ಹಗದೂರು,ಹೂಡಿ ವಾರ್ಡ್ ನಲ್ಲಿ ನೂರಾರು ಕಾರ್ಯಕರ್ತರ ಜೊತೆಗೆ ಸೇರಿ ಪ್ರಮುಖ ಬೀದಿಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಪ್ರಚಾರ ನಡೆಸಿ ಮಾತನಾಡಿದ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್. ನಾಗೇಶ್ ಅವರು ಜನಪರ ಯೋಜನೆಗಳನ್ನು ರೂಪಿಸಲು ಹಾಗೂ ಆಡಳಿತ ನೀಡಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದ್ದು,ಮತದಾರರು ನಮಗೆ ಒಂದು ಅವಕಾಶ ನೀಡವಂತೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಜನಪರ ಆಡಳಿತಕ್ಕೆ ಅನುವು ಮಾಡಿಕೊಡಬೇಕೆಂದು ತಿಳಿಸಿದ ಅವರು, ಏಲ್ಲ ವರ್ಗದ ಜನರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ತಿಳಿಸಿದರು.
ಮಾತನಾಡಿ ಐಟಿಬಿಟಿ ಹಾಗೂ ಗ್ರಾಮಾಂತರ ಪ್ರದೇಶಗಳನ್ನು ಒಳಗೊಂಡಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು,ಈ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾದಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಳ್ಳಿ ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಬುಗೌಡ,ವಿಟಿಬಿ ಬಾಬು,ಅನೀಲ್, ಮುಖಂಡರಾದ ವಿನೋದ, ಸಿ.ಎಂ.ಚಂದ್ರಶೇಖರ್,ದೀಪಕ್ ರಾಜ್, ಮತ್ತಿತರರು ಇದ್ದರು.
============
ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಳತ್ತೂರು ಹೆಚ್.ನಾಗೇಶ್ ಅವರು ವೈಟ್ ಫೀಲ್ಡ್, ಹಗದೂರು,ಹೂಡಿ ವಾರ್ಡನಲ್ಲಿಪ್ರಚಾರ ಮಾಡಿದರು.