ಮಹದೇವಪುರ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ : ಮಂಜುಳಾ

ಕೆ.ಆರ್.ಪುರ,ಮೇ.೬- ಮಹದೇವಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಕುರುಡುಸೊಣ್ಣೇನಹಳ್ಳಿ,ಕೆ.ದೊಮ್ಮಸಂದ್ರ,ಬೆಳತೂರು,ಕುಂಬೇನಾಗ್ರಹಾರ,ವಿಜಯಲಕ್ಷ್ಮಿ ಕಾಲೋನಿ,ಕಾಡುಗೋಡಿ,ದಿನ್ನೂರು ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು.
ಸರ್ವಜನಾಂಗ ಅಭಿವೃದ್ಧಿ ನಮ್ಮ ಧ್ಯೇಯ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಹಾಗೂ ಡಬಲ್ ಇಂಜಿನ್ ಸರ್ಕಾರದ ಮಹತ್ತರ ಯೋಜನೆಗಳಿಗಾಗಿ ಬಿಜೆಪಿ ಪಕ್ಷಕ್ಕೆ ಮತ ನಿಡುವಂತೆ ಮನವಿಮಾಡಿದರು.
ನಮ್ಮ ಬೂತ್ ಗೆದ್ದರೆ ನಮ್ಮ ಕ್ಷೇತ್ರ ಗೆದ್ದಂತೆ ಈ ನಿಟ್ಟಿನಲ್ಲಿ ನಿಮ್ಮ ಬೂತ್ ಗಳಲ್ಲಿ ಮುನ್‌ಡೆ ನೀಡುವಂತೆ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಸಲಹೆ ನೀಡಿದರು.
ಗ್ರಾಮ ಪಂಚಾಯತಿಗಳ ಸರ್ವತೋಮುಖ ಬೆಳವಣಿಗೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು,ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಪಡಿಸಲು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.
ಮಹದೇವಪುರ ಕ್ಷೇತ್ರದ ಏಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಈಡಿದ ಕನ್ನಡಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್,ಅನೀಲ್,ಮಲ್ಲಿಕಾರ್ಜುನ,ಕೇಶವ ಸೇರಿದಂತೆ ಇದ್ದರು.

ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುರುಡುಸೊಣ್ಣೇನಹಳ್ಳಿ ಸೇರಿದಂತೆ ವಿವಿಧೆಡೆ ಪ್ರಚಾರ ಮಾಡಿದರು.