
ಹನೂರು ಮಾ 18 : ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಲೆ ಮಹದೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ, ಹಾಗೂ ಬೆಳ್ಳಿ ರಥ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ನೆರವೇರಿಸಿದರು.
ಮಹದೇಶ್ವರ ಬೆಟ್ಟಕ್ಕೆ ಹೇಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಹಾಗೂ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯಿತು.

ನಂತರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸಾಲೂರು ಮಠಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಜೊತೆ ಗೂಡಿ ಬೆಳ್ಳಿ ರಥ ಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ನಂತರ ದೀಪದ ಗಿರಿ ಒಡ್ದುವಿನಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಮಲೆ ಮಹದೇಶ್ವರಸ್ವಾಮಿಯ 108ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅನಾವರಣ ಗೊಳಿಸಿದರು, ನಂತರ ವೇದಿಕೆ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಗಳು ಸುತ್ತೂರು ಮಠ, ಸಾಲೂರು ಬೃಹನ್ಮಠ ಹಿರಿಯ ಶ್ರೀಗಳು ಗುರುಸ್ವಾಮಿಗಳು, ಶ್ರೀ ಜಿಲ್ಲಾ ಉಸ್ತುವಾರಿ ಸಚಿವ ವಿ, ಸೊಮ್ಮಣ್ಣ, ಸಚಿವರು ಎಸ್.ಟಿ ಸೋಮಶೇಖರ್, ಶಾಸಕ ಆರ್ ನರೇಂದ್ರ, ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಕೊಳ್ಳೇಗಾಲ ಶಾಸಕ ಎನ್ ಮಹೇಶ್, ಕಾಡ ಅಧ್ಯಕ್ಷ ನಿಜಗುಣರಾಜು, ಡಾ, ಪ್ರೀತನ್ ನಾಗಪ್ಪ, ದತೇಶ್ ಕುಮಾರ್ ಪ್ರಾಧಿಕಾರ ಕಾರ್ಯದರ್ಶಿ ಕ್ಯಾತಯಿನಿದೇವಿ, ಉಪ ಕಾರ್ಯದರ್ಶಿ ಬಸವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.