ಮಹನೀಯರ ಜನ್ಮದಿನಾಚರಣೆ ಅರ್ಥಪೂರ್ಣ – ಜಿಲ್ಲಾಧಿಕಾರಿ

ಕೋಲಾರ, ಮಾ,೩೧-ಪ್ರಸತ್ತ ಸಾಲಿನ ಏಪ್ರಿಲ್ ೫ ರಂದು ಡಾ|| ಬಾಬು ಜಗಜೀವನ ರಾಂ ರವರ ೧೧೬ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ ೧೪ ರಂದು ಡಾ|| ಬಿ.ಆರ್.ಅಂಬೇಡ್ಕರ್ ರವರ ೧೩೨ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗಳು ೨೦೨೩ ರ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗದಂತೆ ಮಹನೀಯರ ಜನ್ಮ ದಿನಾಚರಣೆಯನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಡಾ|| ಬಾಬು ಜಗಜೀವನ ರಾಂ ರವರ ಮತ್ತು ಡಾ|| ಬಿ.ಆರ್.ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸಲು ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷವೂ ಬಹಳ ಅರ್ಥಪೂರ್ಣವಾಗಿ ಡಾ|| ಬಾಬು ಜಗಜೀವನ್ ರಾವ್ ಮತ್ತು ಡಾ|| ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳು ಭಾಗಿಯಾಗದಂತೆ ವೇದಿಕೆ ಕಾರ್ಯಕ್ರಮವನ್ನು ನಡೆಸಲು ಅನುಮತಿಸಲಾಗಿದೆ. ಪಲ್ಲಕ್ಕಿ ಮೆರವಣಿಗೆ ಧ್ವನಿ ವರ್ಧಕ ಹಾಗೂ ಡಿಜೆ ಬಳಕೆ ಮುಂತಾದ ಕಾರ್ಯಕ್ರಮಗಳನ್ನು ಮಾಡಬೇಕಾದರೆ ಪೊಲೀಸ್ ಇಲಾಖೆಯ ಅನುಮತಿ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷಧಿಕಾರಿ ಎಂ.ನಾರಾಯಣ್, ಕೆಜಿಎಫ್ ಪೊಲೀಸ್ ವರಿಷಧಿಕಾರಿಯಾದ ಧರಣಿ ದೇವಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.