ಮಹನೀಯರ ಜಯಂತಿ ಆಚರಣೆ


ಹೊಸಪೇಟೆ ಸೆ1: ವಿಜಯನಗರ ಜಿಲ್ಲಾಡಳಿತದಿಂದ ಗುರುವಾರ ವಿವಿಧ ಮಹನೀಯರ ಜಯಂತಿ ಆಚರಣೆ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ನೆರವೇರಿಸಲಾಯಿತು.
ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ಧೇಶ್ವರ, ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಬಿ.ದೇವೇಂದ್ರಪ್ಪ ಸೇರಿದಂತೆ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ವಿವಿಧ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.