ಮಹನೀಯರ ಜಯಂತಿ ಕಡ್ಡಾಯವಾಗಿ ಆಚರಿಸಿ:ಶಿವಕುಮಾರ ಶೀಲವಂತ

ಬೀದರ,ಜ.21:ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಹನೀಯರ ಜಯಂತಿಯನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಅವರು ಶುಕ್ರವಾರÀ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿ ಹಾಗೂ ಮಡಿವಾಳ ಮಾಚಿದೇವರ ಜಯಂತಿಯ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನವರಿ 28 ರಂದು ಸವಿತಾ ಮಹರ್ಷಿ ಜಯಂತಿ ಬೆಳಗ್ಗೆ 10 ಗಂಟೆಗೆ ಹಾಗೂ ಫೆಬ್ರುವರಿ 1ಕ್ಕೆ ಮಡಿವಾಳ ಮಾಚಿದೇವ ಜಯಂತಿ ಬೆಳಿಗ್ಗೆ 9 ಗಂಟೆಗೆ ವಿವಿಧ ಸರ್ಕಾರಿ-ಅರೆ ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಪೂಜೆ ಸಲ್ಲಿಸಿ ಎಲ್ಲರೂ ಜಿಲ್ಲಾಧಿಕಾರಿ ಕಛೇರಿಗೆ ಸೇರಬೇಕೆಂದು ಹೇಳಿದರು.

ಜನವರಿ 28ಕ್ಕೆ ಬೆಳಿಗ್ಗೆ 10 ಗಂಟೆಗೆ ಮತ್ತು ಫೆಬ್ರುವರಿ 1 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಹನಿಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯು ನರಗದ ಪ್ರಮುಖ ವೃತ್ತಗಳಾದ ಶಿವಾಜಿ ವೃತ್ತ, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ,ರೋಟರಿ ವೃತ್ತ ಹಾಗೂ ಮಾಚಿದೇವರ ಜಯಂತ್ಯೋತ್ಸವದಂದು ಮಡಿವಾಳ ವೃತ್ತದ ಮಾರ್ಗವಾಗಿ ಜಿಲ್ಲಾ ರಂಗ ಮಂದಿರ ತಲುಪಲಿದೆ ನಂತರ ಅಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಗೌತಮ ಅರಳಿ, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.