ಮಹರ್ಷಿ ವಾಲ್ಮೀಕಿ ಜೀವನ ಸಂದೇಶ ಇಂದಿಗೂ ಪ್ರಸ್ತುತ

ಚನ್ನಮ್ಮನ ಕಿತ್ತೂರ, ಅ 29: ಮಹನೀಯರುಗಳ ಜೀವನ ಸಾಧನೆ ಹಾಗೂ ಆದರ್ಶ ಪ್ರೇರಣೆ ನೀಡುತ್ತವೆ. ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಗ್ರಾ.ಪಂ. ಅಧ್ಯಕ್ಷ ದೇಸಾಯಿ ಅರ್ಜುನ ಗಾಳಿ ಹೇಳಿದರು.
ಸಮೀಪದ ಗಂಧದ ನಾಡು ಗಂದಿಗವಾಡದ ಗ್ರಾ.ಪಂ.ದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿಸಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ರಾಮಾಯಣ ಶ್ರೇಷ್ಠ ಮಹಾಕಾವ್ಯ. ಜಗತ್ತಿಗೆ ಆದರ್ಶವಾಗಿದೆ. ಮಹರ್ಷಿ ವಾಲ್ಮೀಕಿ ಜೀವನ ಸಂದೇಶ ಇಂದಿಗೂ ಪ್ರಸ್ತುತ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರು, ಸರ್ವ ಸದಸ್ಯರು, ಪಿಡಿಓ, ಕಾರ್ಯದರ್ಶಿ ಸೇರಿದಂತೆ ಸಿಬ್ಬಂದಿ, ಸಾರ್ವಜನಿಕರಿದ್ದರು. ತಾಲೂಕಾದ್ಯಂತ ಹಾಗೂ ವಿವಿಧ ಗ್ರಾ.ಪಂ.ಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.