ಮಹಾಂತರೆಡ್ಡಿಗೆ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ

ಬಳ್ಳಾರಿ,ಜ.09: ನಗರದಲ್ಲಿ ಸಿಪಿಐ ಆಗಿ ಕಾರ್ಯನಿರ್ವಹಿಸಿ ಡಿವೈಎಸ್ಪಿಯಾಗಿ ನಿವೃತ್ತಿಹೊಂಡಿರುವ ಎನ್.ಆರ್. ಮಹಾಮತರೆಡ್ಡಿ ಅವರಿಗೆ 2019ನೇ ಸಾಲಿನ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ ಸಂದಿದೆ.
ಬೆಂಗಳೂರಿನ ರಾಜಭವನದಲ್ಲಿ ಕಳೆದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತಿತರರು ಇದ್ದರು.