ಮಹಾಂತೇಶ್ ಕಾಳೆಗೆ ರಾಜ್ಯೋತ್ಸವ ಪ್ರಶಸ್ತಿ

ಹುಬ್ಬಳ್ಳಿ, ನ 18- ವಿಶ್ವ ಕನ್ನಡ ಬಳಗ, ಹುಬ್ಬಳ್ಳಿ ವತಿಯಿಂದ ನಗರದ ಜೆ.ಸಿ. ನಗರದ ಅಕ್ಕನಬಳಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರಕಲೆ ವಿಭಾಗದಲ್ಲಿ ಮಹಾಂತೇಶ ಆರ್. ಕಾಳೆ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಹಾಂತೇಶ ಅವರು 2008 ರಲ್ಲಿ ಮಧ್ಯಪ್ರದೇಶದ ಉಜೈನ್ ನಲ್ಲಿ ನಡೆದ ರಾಷ್ಟ್ರೀಯ ಕಲಾ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಅಲ್ಲದೇ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ವೇಗವಾಗಿ ಬಿಡಿಸುವ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಗೈದಿದ್ದಾರೆ. ಅವರ ಈ ಸಾಧನೆಗಳನ್ನು ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.