ಮಹಾಗಾಂವ್ ಕ್ರಾಸ್ ಬಳಿ ಜಗದ್ಗುರು ರೇಣುಕಾಚಾರ್ಯ ಸಭಾಭವನ ಮತ್ತು ಮಂದಿರ

ಕಲಬುರಗಿ: ಜ. 11:ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾಭವನ ಮತ್ತು ಶ್ರೀ ರೇಣುಕಾಚಾರ್ಯ ಮಂದಿರ ನಿರ್ಮಾಣ ಯೋಜನೆಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭಾಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಂದು ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಲಾಗುವುದು. ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾಭವನ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರ ನಿರ್ಮಾಣಕ್ಕೆ ಭಕ್ತಾದಿಗಳು ಸಹ ತಮ್ಮ ಸಹಾಯ ಸಹಕಾರ ನೀಡುವ ಮೂಲಕ ಈ ಧರ್ಮ ಕಾರ್ಯಕ್ಕೆ ಕೈ ಜೋಡಿಸಬೇಕೆಂದು ಅವರು ತಿಳಿಸಿದರು. ಡಾ. ಶಿವರಾಜ ಕುಂಬಾರ ನಾಗರಾಜ ಕುಂಬಾರ ಶಿವಲಿಂಗರಾಜ ಕುಂಬಾರ ಬಸವರಾಜ ಕುಂಬಾರ ಸಹೋದರರು ಭೂದಾನ ಮಾಡಿದ ಸ್ಥಳದಲ್ಲಿ ಈ ಕಾರ್ಯ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.