ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 4ಲಕ್ಷ ರೂ.ಚೆಕ್ ವಿತರಣೆ

ವಿಜಯಪುರ, ಮೇ.21: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೃಷಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನಬಸಯ್ಯ ಹಿರೇಮಠ ರವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಹಿನ್ನೆಲೆ ಅವರ ಧರ್ಮಪತ್ನಿಯಾದ ಶ್ರೀಮತಿ ಮಧುಮತಿ ಹಿರೇಮಠ ಅವರಿಗೆ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ 4 ಲಕ್ಷ ರೂಪಾಯಿ ಚೆಕ್ಕನ್ನು ಶನಿವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಪೃಥ್ವೀರಾಜ ಪಾಟೀಲ, ರಾಜ್ಯ ಸಂಘದ ಸದಸ್ಯರಾದ ಆದಣ್ಣ ಹೊಸಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮೇಶ ಮಾಳಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಮತಿ ಶಿಲ್ಪಾ ಗುತ್ತೇದಾರ, ಶ್ರೀಮತಿ ಅಮೃತಾ ಕಿಟ್ಟದ, ಕಲ್ಲಪ್ಪ ನಂದರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.