ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿ

ಬೀದರ್:ಮಾ.14: ಪ್ರತಿಯೊಬ್ಬರೂ ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ ನುಡಿದರು.
ಬೀದರ್ ತಾಲ್ಲೂಕಿನ ಚಾಂಬೋಳ್ ಗ್ರಾಮದ ರುದ್ರಮುನೇಶ್ವರ ಮಠದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ಹೆಚ್ಚು ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಗುರುಗಳು, ಸಂತರ ವಾಣಿ ಆಲಿಸಬೇಕು. ಉತ್ತಮ ನಡೆ, ನುಡಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವುದು ತಂದೆ-ತಾಯಿಯ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ ಹಂಶಕವಿ ತಿಳಿಸಿದರು.
ರುದ್ರಮುನಿ ಪಟ್ಟದ್ದೇವರು ದಿವ್ಯ ಸಾನಿಧ್ಯ, ಮುರುಘೇಂದ್ರ ದೇವರು ನೇತೃತ್ವ ವಹಿಸಿದ್ದರು. ಯೋಗ ಗುರು ಚನ್ನಯ್ಯ ಸ್ವಾಮಿ ಇದ್ದರು.