
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಆ. ೨೨: ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧೀಜಿ ಅವರ ಪ್ರತಿಮೆಧ್ವಂಸಗೊಳಿಸಿರುವ ಘಟನೆ, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರುಪಟ್ಟಣದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ಸೋಮವಾರ ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ.ಹೊಳೆಹೊನ್ನೂರು ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಲ್ಲಿದ್ದ ರಾಷ್ಟ್ರಪಿತನ ಪ್ರತಿಮೆ ಧ್ವಂಸಗೊಳಿಸಲಾಗಿದೆ. ಬೈಕ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯಎಸಗಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳುತಿಳಿದುಬರಬೇಕಾಗಿದೆ.ಗಾಂಧೀಜಿ ಪ್ರತಿಮೆಯ ಧ್ವಂಸ ವಿಷಯ ತಿಳಿಯುತ್ತಿದ್ದಂತೆ ಸೋಮವಾರ ಬೆಳಿಗ್ಗೆ ಸ್ಥಳೀಯನೂರಾರು ನಾಗರೀಕರು, ಗಾಂಧೀಜಿ ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿ ಆಕ್ರೋಶವ್ಯಕ್ತಪಡಿಸಿದ್ದಾರೆ.ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಉದ್ರಿಕ್ತಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸ ನಡೆಸುವಂತಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧೀಜಿ ವೃತ್ತ ಸೇರಿದಂತೆ ಪಟ್ಟಣದ ಆಯಕಟ್ಟಿನಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆಹೊಳೆಹೊನ್ನೂರು ಠಾಣೆ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.