ಮಹಾದಲ್ಲಿ ಸೋಂಕಿಗೆ ಮೂವರು ಬಲಿ

ಮುಂಬೈ,ಮಾ.೨೫- ದೇಶದಲ್ಲಿ ದಿನ ನಿತ್ಯ ಕೊರೊನಾ ಸೋಂಕು ಹೆಚ್ಚುತ್ತಿರುವುದರಲ್ಲಿಯೇ ಮಹಾರಾಷ್ಟ್ರ ಒಂದರಲ್ಲಿಯೇ ಹೊಸದಾಗಿ ೩೪೩ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮೂರು ಮಂದಿ ಸಾವನ್ನಪ್ಪಿದ್ದಾರೆ

ಸಾವನ್ನಪ್ಪಿರುವ ಮೂರು ಮಂದಿ ಥಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ಫೆಬ್ರವರಿ ತಿಂಗಳಲ್ಲಿ ಕೋವಿಡ್ ಸೋಂಕಿನ ಸಾವುಗಳ ಸಂಖ್ಯೆ ಶೂನ್ಯದಲ್ಲಿದ್ದರೆ ಮಾರ್ಚ್‌ನಲ್ಲಿ ರಾಜ್ಯದಲ್ಲಿ ಕೋವಿಡ್ ನಿಂದ ಮಹಾರಾಷ್ಟ್ರದಲ್ಲಿ ಸಾವುಗಳ ಸಂಖ್ಯೆ ಈಗ ೧೩ ಕ್ಕೆ ಏರಿದೆಯಗಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮುಂಬೈನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೪೫೩ಕ್ಕೆ ಏರಿಕೆಯಾಗಿದ್ದು ಮಾರ್ಚ್ ತಿಂಗಳಿನಾದ್ಯಂತ ಇನ್ನಷ್ಟು ಹೆಚ್ಚುವ ಸಾದ್ಯತೆಗಳಿವೆ., ರಾಜ್ಯದಾದ್ಯಂತ, ಸಕ್ರಿಯ ಪ್ರಕರಣಗಳ ಸಂಖ್ಯೆ ೧,೭೬೩ ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಜಿನೋಮ್ ಸೀಕ್ವೆನ್ಸಿಂಗ್ನಲ್ಲಿ ಭಾರತೀಯ ವಿಜ್ಞಾನಿಗಳು ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಹೊಸ ಒಮಿಕ್ರಾನ್ ಉಪ ತಳಿ ಎಕ್ಸ್‌ಬಿಬಿ.೧.೧೬ ಹೆಚ್ಚಾಗಿ ಕಾಣಿಸಿಕೊಂಡಿರುವುದು ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಎಚ್ ಎನ್ ರಿಲಯನ್ಸ್ ಆಸ್ಪತ್ರೆಯ ಹಿರಿಯ ತೀವ್ರ ತಜ್ಞ ಡಾ ರಾಹುಲ್ ಪಂಡಿತ್ ಹೇಳಿದ್ದಾರೆ.

ಕೊವಿಡ್ ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳದ ಹೊರತಾಗಿಯೂ ಆತಂಕ ಪಡುವ ಅಗತ್ಯವಿಲ್ಲ. ಸಾಂಕ್ರಾಮಿಕ ರೋಗಕ್ಕೆ ಮೂರು ವರ್ಷಗಳ ನಂತರ, ಹಿರಿಯ ನಾಗರಿಕರು ಮತ್ತು ದೀರ್ಘಕಾಲದ ಪರಿಸ್ಥಿತಿ ಹೊಂದಿರುವ ಜನರು ತೀವ್ರವಾದ ಕೋವಿಡ್‌ನ ಹೆಚ್ಚಿನ ಅಪಾಯದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

.ಉಳಿದವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ ಎಂದು ತಿಳಿದ್ದಾರೆ.