ಮಹಾದೇವ ಪ್ರಕಾಶ್ ದಿಢೀರ್ ರಾಜೀನಾಮೆ

ಬೆಂಗಳೂರು, ನ.19- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಿಸಿದ್ದ ಅವರು, ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.