ಮಹಾನಗರ ಪಾಲಿಕೆಯ ಕಸ ವಿಲೇವಾರಿ ವಾಹನಗಳಿಗೆ ಚಾಲನೆ ನೀಡಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಆ.16- ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಡಿ ಖರೀದಿಸಲಾದ 1.14 ಕೋಟಿ ರೂ. ವೆಚ್ಚದ 12 ಕಸ ವಿಲೇವಾರಿ ವಾಹನಗಳು ಹಾಗೂ 33 ಲಕ್ಷ ರೂ.ವೆಚ್ಚದ 2 ಡ್ರೈ ಕ್ಲೀನಿಂಗ್ ಟ್ರಾಕ್ಟರ್‍ಗಳಿಗೆ ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಂಗಳವಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್‍ಕುಮಾರ್, ಎಡಿಸಿ ಮೊಹಮ್ಮದ್ ಜುಬೇರಾ, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಸೇರಿದಂತೆ ಇತರರು ಇದ್ದರು.