ಮಹಾಪರಿನಿರ್ವಾಣ ದಿನ ಆಚರಣೆ ನಾಳೆ

ಕಲಬುರಗಿ,ಡಿ.4-ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ: ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿವಸವನ್ನು ಡಿ.6 ರಂದು ಬೆಳಿಗ್ಗೆ 10 ಗಂಟೆಗೆ ಆಚರಣೆ ಮಾಡಲಾಗುವದು.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು, ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಹಿರಿಯರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.