ಮಹಾಯೋಗಿ ಶ್ರೀ ವೇಮನ ಜಯಂತಿ ಆಚರಣೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜ.21: ನಗರದ ತಾ.ಪಂ. ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ತಾಲೂಕಾಡಳಿತ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಮಹಾಯೋಗಿ ಶ್ರೀ ವೇಮನ ಜಯಂತ್ಯುತ್ಸವ ಕಾರ್ಯಕ್ರಮವನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
 ನಂತರ ಮಾತನಾಡಿದ ಅವರು ಸಮಾಜದ ಒಳಿತಿಗಾಗಿ ಗ್ರಂಥಗಳು, ವಚನಗಳು, ಕೀರ್ತನೆಗಳು, ಪುರಾಣ ಪ್ರವಚನಗಳ ಮೂಲಕ ಮಾನವೀಯತೆ ಮತ್ತು ಸಮಾನತೆಯ ಸಂದೇಶವನ್ನು ನೀಡಿದ ಶರಣರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಅವರು ನಡೆದು ಬಂದ ದಾರಿ ಹಾಗೂ ಆದರ್ಶಗಳನ್ನು ಪ್ರಸ್ತುತ ಸಮಾಜಕ್ಕೆ ಪರಿಚಯಿಸುವ ದೃಷ್ಟಿಯಿಂದ ಸರ್ಕಾರದ ವತಿಯಿಂದ ಜಯಂತಿ ಆಚರಿಸಲಾಗುತ್ತಿದೆ.
 ಇದೇ ವೇಳೆ ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಗಾದಿಲಿಂಗಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲಿಂಗಾರೆಡ್ಡಿ, ರೆಡ್ಡಿಜನ ಸಂಘದ ತಾಲೂಕು ಅಧ್ಯಕ್ಷ ಗೋಪಾಲರೆಡ್ಡಿ ಹಾಗೂ ಸಮಾಜದ ಮುಖಂಡರು ಇದ್ದರು.