
ಮುಂಬೈ,ಏ.4- ಮಹಾರಾಷ್ಟ್ರದಲ್ಲಿ ದಿನ ನಿತ್ಯ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿಕರ್ಪ್ಯೂ ಜಾರಿ ಮಾಡಲಾಗಿದೆ.
ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ರಾತ್ರಿಕರ್ಪ್ಯೂ ಜಾರಿ ಮಾಡಲಾಗಿದೆ.ಜೊತೆಗೆ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ರಾತ್ರಿ 7 ಗಂಟೆಯ ತನಕ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ರಾತ್ರಿಕರ್ಪ್ಯೂ ಮತ್ತು ಲಾಕ್ ಡೌನಗ ಜಾರಿ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಪರಿಸ್ಥಿತಿ ನಿಭಾಯಿಸಲು ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವ ಎಚ್ಚರಿಕೆ ನೀಡಲಾಗಿದೆ.
ಮಾಲ್, ರೆಸ್ಟೋರೆಂಟ್, ಬಾರ್ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು ಮನೆ ಗೆ ಕೊಂಡೊಯ್ಯಲು ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಉಳಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಿ ಉಳಿದೆಲ್ಲಾ ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸುವ ಜೊತೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಎಚ್ಚರಿಕೆ ನೀಡಲಾಗಿದೆ.