ಮಹಾರಾಷ್ಟ್ರ ಮಾಜಿ ಸಚಿವರಿಗೆ ಹಿನ್ನೆಡೆ: ಸಿಬಿಐ ತನಿಖೆಗೆ ಸುಪ್ರೀಂ ಸಮ್ಮತಿ

ನವದೆಹಲಿ,ಏ.8- ಭ್ರಷ್ಟಾಚಾರಕ್ಕೆ ಬಂಧಿಸಿದಂತೆ ಮುಂಬೈ ಹೈಕೋರ್ಟ್ ನೀಡಿರುವ ಸಿಬಿಐ ತನಿಖೆ ರದ್ದು ಮಾಡುವಂತೆ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶ್ ಮುಖ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಸಿಬಿಐ ಸ್ವತಂತ್ರ ಸಂಸ್ಥೆಯಾಗಿದ್ದು ಭ್ರಷ್ಟಾಚಾರದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಗಳಾದ ಎಸ್.ಕೆ ಕೌಲ್,‌ಮತ್ತು ಹೇಮಂತ್ ಗುಪ್ತಾ ಅವರು ಮುಂಬೈ ಹೈಕೋರ್ಟ್ ನೀಡಿರುವ ಸಿಬಿಐ ತನಿಖೆಗೆ ಹಸಿರು ನಿಶಾನೆ ನೀಡಿದೆ.

ಮಹಾರಾಷ್ಟ್ರದ ಗೃಹ ಸಚಿವರಾಗಿದ್ದರ ಮೇಲೆ ಕೇಳಿಬಂದಿರುವ ಆರೋಪದ ಗಂಬೀರ ಸ್ವರೂಪದ್ದು ಹೀಗಾಗಿ ಸಿಬಿಐ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆ ತರಲಿ ಎಂದು ನ್ಯಾಯಪೀಠ ಹೇಳಿದೆ.

ಮುಂಬೈನ ಮಾಜಿ ಪೊಲೀಸ್ ಪರಂ ಬೀರ್ ಸಿಂಗ್ ಅವರು ಮಾಜಿ ಗೃಹಸಚಿವ ಪಾಟೀಲ್ ದೇಶ್ ಮುಖ್ ವಿರುದ್ದ ನೂರು ಕೋಟಿ ರೂಪಾಯಿ ಆರೋಪ ಮಾಡಿದ್ದರು.

ಈ ಸಂಬಂಧ ಮುಂಬೈ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ಮಾಡಿತ್ತು