ಮಹಾರಾಷ್ಟ್ರ 15 ದಿನ ಲಾಕ್‌ಡೌನ್ ವಿಸ್ತರಣೆ

ಮುಂಬೈ, ಏ. ೨೯- ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಾದ್ಯಂತ ಮತ್ತೆ ೧೫ ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ೧೫ ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಫೆ ಹೇಳಿದರು.
ಮಹಾರಾಷ್ಟ್ರದಲ್ಲಿ ಕೊರೊನಾ ತಡೆಗೆ ಕಳೆದ ಏಪ್ರಿಲ್ ೪ ರಿಂದ ಏ. ೩೦ರ ವರೆಗೆ ವಾರಾಂತ್ಯ ಕರ್ಫ್ಯೂ ಹಾಗೂ ವಾರದ ದಿನಗಳಲ್ಲಿ ಜನರ ಅನಗತ್ಯ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧಗಳು ಏ. ೩೦ಕ್ಕೆ ಮುಕ್ತಾಯವಾಗಲಿರುವುದರಿಂದ ಮತ್ತೆ ೧೫ ದಿನಗಳ ಕಾಲ ನಿರ್ಬಂಧಗಳನ್ನು ಮುಂದುವರೆಸಲಾಗಿದೆ ಎಂದು ಅವರು ಹೇಳಿದರು.