ಮಹಾಲಕ್ಷ್ಮಿ ಶಕ್ತಿ ಪೀಠದ ಜಾತ್ರಾ ಮಹೋತ್ಸವ ರದ್ದು

ಕಲಬುರಗಿ:ಎ.20: ಶ್ರೀನಿವಾಸ್ ಸರಡಗಿ ಗ್ರಾಮ ಮಹಾಲಕ್ಷ್ಮಿ ಶಕ್ತಿ ಪೀಠದ ಏ. 23 ಮತ್ತು 24 ರಂದು ನಡೆಯಬೇಕಿದ್ದ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ್ ಪಾಟೀಲ್ ವೆಂಕಟ್‍ಬೆನ್ನೂರ್ ತಿಳಿಸಿದ್ದಾರೆ.
ಪೀಠಾಧಿಪತಿ ಡಾ.ಅಪ್ಪಾರಾವ್ ದೇವಿ ಮುತ್ಯಾ ಅವರ ನೇತೃತ್ವದಲ್ಲಿ ಸಂಪ್ರದಾಯದಂತೆ ಸರಳವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ ದೇವಿಗೆ ಮಹಾಭಿಷೇಕ ನೆರವೇರಿಸಲಾಗುವುದು. ನಂತರ ಮಹಾ ಅಲಂಕಾರ ನೆರವೇರುವುದು. ಬಳಿಕ ಮಹಾಪ್ರಸಾದ ವಿತರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ನಿಯಮದಂತೆ ಭಕ್ತರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.