ಮಹಾವೀರ ಜಯಂತಿಯಂದು ಮಾಂಸ ಮಾರಾಟ ನಿಷೇಧ

ಕಲಬುರಗಿ.ಏ.23: ಭಗವಾನ ಮಹಾವೀರ ಜಯಂತಿ ಪ್ರಯುಕ್ತ ಏ.25 ರಂದು ಕಲಬುರಗಿ ನಗರದಾದ್ಯಂತ ಯಾವುದೇ ರೀತಿಯ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕೆ.ಎಂ.ಸಿ ಕಾಯ್ದೆ 1976 ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.