ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಲು ಒತ್ತಾಯ

ಬೆಂಗಳೂರು, ಮಾ. ೩೧- ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಆಶಯದಂತೆ ಶೇ. ೩೩ ರಷ್ಟು ಟಿಕೆಟ್ ಗಳನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಸಿವಿ ರಾಮನ್ ನಗರ ಹಿರಿಯ ಮಹಿಳಾ ಕಾಂಗ್ರೆಸ್ ಮುಖಂಡರು, ಸದಸ್ಯರು ಒತ್ತಾಯಿಸಿದ್ದಾರೆ.
ಬೆಂಗಳೂರು ಉತ್ತರ ಮತ್ತು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ೧೬ ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು. ಹಿಂದಿನ ಮೂರು ಅವಧಿಯಲ್ಲಿ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪುರುಷ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದರು. ಆದರೆ ಯಾರು ಯಾವ ಅಭ್ಯರ್ಥಿಯೂ ಗೆಲುವು ಸಾಧಿಸಿಲ್ಲ ಎಂದು ಕಾಂಗ್ರೆಸ್ ಮಹಿಳಾ ಮುಖಂಡರು ತಿಳಿಸಿದ್ದಾರೆ.
ಈ ಬಾರಿ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರ ನಿಷ್ಠಾವಂತ ಪಕ್ಷದ ಕಾರ್ಯಕರ್ತೆ ಮಾಜಿ ಬಿಬಿಎಂಪಿ ಸದಸ್ಯೆ ಅಮುದಾಗೋಪಿ ಚಂದ್ರ ಅವರಿಗೆ ಬೆಂಗಳೂರು ನಗರದ ೧೬೧ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿ ಅವಕಾಶ ಮಾಡಿಕೊಡಬೇಕೆಂದು ಮುಖಂಡರಾದ ಸೋನಾ, ನಿರ್ಮಲಾ, ಇತರರು ಒತ್ತಾಯಿಸಿದ್ದಾರೆ.