ಮಹಿಳಾ ಕನ್ನಡ ಜಾನಪದ ಪರಿಷತ್ತು ಉದ್ಘಾಟನೆ

ಲಿಂಗಸುಗೂರು.ಜ.೦೬-ಸ್ಥಳೀಯ ವಿಸಿಬಿ ಮಹಾವಿದ್ಯಾಲಯದಲ್ಲಿ ಮಹಿಳಾ ಕನ್ನಡ ಜಾನಪದ ಪರಿಷತ್ತಿನ ಉದ್ಘಾಟನೆ ಹಾಗೂ ಕಾರ್ಯಚಟುವಟಿಕೆಗಳ ಪ್ರಾರಂಭೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಜಾಪ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪರಿಷತ್ತಿನ ತಾಲೂಕು ಅಧ್ಯಕ್ಷೆ ಮಂಜುಳಾ ಎಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಜಾಪ ಜಿಲ್ಲಾಧ್ಯಕ್ಷ ಶರಣಪ್ಪ ಗೋನಾಳ, ಮಹಿಳಾ ಪರಿಷತ್ತಿನ ಜಿಲ್ಲಾಧ್ಯಕ್ಷೆ ದಾನಮ್ಮ, ಕಸಾಪ ಅಧ್ಯಕ್ಷ ಪ್ರೊ.ಜಿ.ವಿ.ಕೆಂಚನಗುಡ್ಡ, ಕಜಾಪ ತಾಲೂಕು ಅಧ್ಯಕ್ಷ ಮಂಜುನಾಥ ಕಾಮಿನ್, ವಿಸಿಬಿ ಕಾಲೆಜು ಪ್ರಾಚಾರ್ಯ ಡಾ.ಪಿ.ಜಗದೀಶ ಸೇರಿ ಇತರರು ಕಾರ್ಯಕ್ರಮದಲ್ಲಿ ಇದ್ದರು.