ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಎಐಡಿಎಸ್‍ಓ ಬೆಂಬಲ

ಕಲಬುರಗಿ,ಮೇ.5-ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‍ನಲ್ಲಿ ಮಹಿಳಾ ಕುಸ್ತಿ ಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಬೆಂಬಲ ಸೂಚಿಸಿದೆ.
ಮಹಿಳಾ ಕುಸ್ತಿ ಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ವಿದ್ಯಾರ್ಥಿಗಳು ಎಐಡಿಎಸ್‍ಓ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಿ ಅವರ ಅಧಿಕಾರದಿಂದ ವಜಾಗೊಳಿಸಿ ಮತ್ತು ಫೆಡರೇಶನ್ ನಿಂದ ಉಚ್ಚಾಟನೆಗೊಳಿಸಬೇಕು, ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು, ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿ ಪಡಿಸಲು ಸರ್ಕಾರ ಮತ್ತು ಪೆÇಲೀಸ್ ಆಡಳಿತವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ತುಳಜಾರಾಮ ಎನ್.ಕೆ, ಉಪಾಧ್ಯಕ್ಷರಾದ ಸ್ನೇಹ ಕಟ್ಟಿಮನಿ, ಸದಸ್ಯರಾದ ವೆಂಕಟೇಶ ದೇವದುರ್ಗ, ಗೋವಿಂದ ಯಳವಾರ, ಪ್ರೀತಿ ದೊಡ್ಡಮನಿ, ನಾಗರಾಜ್, ಯುವರಾಜ್, ಭೀಮು ಆಂದೋಲಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.