ಮಹಿಳಾ ದಿನಾಚರಣೆ: ಸೈಕಲ್ ಜಾಥಾ

ಬೀದರ್: ಮಾ.7:ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ‘ಮಹಿಳೆಯರಿಂದ ಆರೋಗ್ಯಕರ ಭಾರತ’ ಘೋಷ ವಾಕ್ಯದೊಂದಿಗೆ ಸೈಕಲ್ ಜಾಥಾ ನಡೆಯಿತು.

ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು.

ಅಲ್ಲಿಂದ ಆರಂಭವಾದ ಜಾಥಾ ಜನವಾಡ ರಸ್ತೆ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಗೆ ತಲುಪಿ ಸಮಾರೋಪಗೊಂಡಿತು. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಡಾ. ಶಂಕರೆಪ್ಪ ಬೊಮ್ಮಾ, ಡಾ. ರಾಜಶೇಖರ ಪಾಟೀಲ, ಡಾ. ಶರಣಯ್ಯ ಸ್ವಾಮಿ, ಡಾ. ಸಂಗಾರೆಡ್ಡಿ, ಡಾ. ವೀರೇಶ ಬಿರಾದಾರ, ಡಾ. ಸಂಗೀತಾ ಪಾಲ್ಗೊಂಡಿದ್ದರು.