ಮಹಿಳಾ ಸಂಘಗಳಿಗೆ 1 ಕೋಟಿ ಸಾಲ ವಿತರಣೆ

ಕೋಲಾರ,ಸೆ. ೧೦:ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ೨ ಕೋಟಿ ರೂ ಸಾಲವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ, ಎಂಎಲ್‌ಸಿ ಅನಿಲ್‌ಕುಮಾರ್, ಎಸ್ಪಿ ಡಿ.ದೇವರಾಜ್,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಾಗನಾಳ ಸೋಮಣ್ಣ, ಕೆ.ವಿ.ದಯಾನಂದ್, ಯಲವಾರ ಸೊಣ್ಣೇಗೌಡ, ಕಸಬಾ ಸೊಸೈಟಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸಪ್ಪ ಮತ್ತಿತರರಿದ್ದರು.