ಮಹಿಳಾ ಸ್ವ ಸಹಾಯ ಸಂಘಕ್ಕೆ ಹಸ್ತಾಂತರ

ಗದಗ ಏ.28: ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಗ್ರಾ.ಪಂ ಮಟ್ಟದ ಮಹಿಳಾ ಸ್ವ-ಸಹಾಯ ಒಕ್ಕೂಟಕ್ಕೆ ಹಸ್ತಾಂತರಿಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯರಾದ ಅಪ್ಪಣ್ಣ ಇನಾಮತಿಯವರು ಮಾತನಾಡಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಪ್ರತಿ ಮನೆ, ಅಂಗಡಿಗಳಿಂದ ಉಂಟಾಗುವ ತ್ಯಾಜ್ಯವನ್ನು ಮಹಿಳಾ ಸ್ವ-ಸಹಾಯ ಸಂಘದ ವತಿಯಿಂದ ಸಂಗ್ರಹಿಸುವ, ಬೇರ್ಪಡಿಸುವ ಮೂಲಕ ಜಾಗೃತಿ ಮೂಡಿಸುವ ಉದ್ದೇಶ ಹೊಂದಿ ಎಂದರು.
ಈ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಸಮಾಲೋಚಕ ಕೃಷ್ಣಪ್ಪ ದೊಡ್ಡಮನಿ, ಗ್ರಾ.ಪಂ ಪಿಡಿಓ, ಸುರೇಶ ಕಪ್ಪತ್ತನವರ, ಗ್ರಾ.ಪಂ ಅಧ್ಯಕ್ಷೆ ಜಯಶ್ರೀ ಅಡರಕಟ್ಟಿ, ವೀರಣ್ಣ ಕೋರಿ ಸೇರಿದಂತೆ ಗ್ರಾ.ಪಂ ಸದಸ್ಯರು ಇತರರು ಇದ್ದರು.