ಮಹಿಳೆಯರಿಗೆ ಕಾನೂನಿನ ಅರಿವು ಅಗತ್ಯ: ನ್ಯಾ.ಬಿ.ಎಸ್. ಭಾರತಿ

ಚಾಮರಾಜನಗರ, ಮಾ.16:- ಮಹಿಳೆಯರು ಸಮಾಜದ ಉನ್ನತ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾನೂನಿನ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಎಸ್. ಭಾರತಿ ತಿಳಿಸಿದರು.
ನಗರದಜಿಲ್ಲಾ ನ್ಯಾಯಾಲಯದ ಅವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಗ್ರಂಥಾಲಯದಲಿ ್ಲಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದಿಂದ ವಂಚಿತರಾಗಿರುವ ಸಾಕಷ್ಟು ಮಹಿಳೆಯರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಅವರಿಗೆ ಕಾನೂನಿನ ಅರಿವಿನ ಕೊರತೆ ಇದೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವತಂತ್ರವಾಗಿ ಬದುಕಲುಕಲಿಯಬೇಕು. ಮಹಿಳೆಯರು ಶೈಕ್ಷಣಿಕವಾಗಿ ಮುನ್ನೆಲೆಗೆ ಬರಬೇಕು. ಮಹಿಳೆಯರ ಉನ್ನತೀಗಾಗಿಸರ್ಕಾರವುಹತ್ತು ಹಲವು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳ ಸದುಪಯೋಗ ಪಡೆದು ಮಹಿಳೆಯರು ಸಬಲೀಕರಣಗೊಳ್ಳಬೇಕು ಎಂದು ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಎನ್. ಆರ್. ಲೋಕಪ್ಪ ಅವರು ಮಾತನಾಡಿ ಮಹಿಳೆಯರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಕ್ರೀಡೆ, ನ್ಯಾಯಾಂಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪುರುಷರಷ್ಟೇ ಸಮಾನ ಸ್ಥಾನಮಾನಗಳಗಳನ್ನು ಗಳಿಸಿರುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣಬಹುದು. ಮಹಿಳೆಯರು ಶೈಕ್ಷಣಿಕವಾಗಿ ಬೆಳೆದಾಗ ಮಾತ್ರದೇಶದಅಭಿವೃದ್ಧಿ ಸಾಧ್ಯ. ಶಿಕ್ಷಣದಿಂದ ವಂಚಿತರಾದ ಮಹಿಳೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಾಜದಲ್ಲಿ ಎಲ್ಲರು ಸಮಾನರು. ಯಾವುದೇ ಹಕ್ಕುಗಳು, ಕಾನೂನುಗಳು ಮಹಿಳೆಯರ ಏಳಿಗೆಗೆ ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕೃಷ್ಣ ಮೆಡಿಕಲ್ ಮಾಲೀಕರಾದ ಸುಜಿನಿ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಮಹಿಳಾ ವಕೀಲರು ಮತ್ತು ನ್ಯಾಯಾಧೀಶರಿಗೆ ಬಹುಮಾನ ವಿತರಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತೂರು ಇಂದುಶೇಖರ್, ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚಂಪಕಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದಎನ್. ವೆಂಕಟೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎನ್. ನಿವೇದಿತಾ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್. ಮಂಜು, ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಇದ್ದರು.